ADVERTISEMENT

ಸಾರಿಗೆ ಕ್ಷೇತ್ರಕ್ಕೆ ತಂತ್ರಜ್ಞಾನ: ಇಸ್ರೊಗೆ ಸವದಿ ಮನವಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 22:34 IST
Last Updated 29 ಏಪ್ರಿಲ್ 2020, 22:34 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೋರಿಕೆ ತಡೆದು, ಕಾರ್ಯದಕ್ಷತೆ ಹೆಚ್ಚಿಸಲುತಂತ್ರಜ್ಞಾನವೊಂದನ್ನು ಅಭಿವೃದ್ಧಿ
ಪಡಿಸಿಕೊಡುವಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಸ್ರೊ ಅಧ್ಯಕ್ಷ ಕೆ.ಶಿವನ್‌ ಅವರಿಗೆ ಮನವಿ ಮಾಡಿದ್ದಾರೆ.

ಬುಧವಾರ ಇಸ್ರೊ ಕೇಂದ್ರ ಕಚೇರಿಯಲ್ಲಿ ಶಿವನ್‌ ಅವರನ್ನು ಭೇಟಿ ಮಾಡಿ ಸವದಿ ಮಾತುಕತೆ ನಡೆಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಿವನ್‌ ಅವರು, ಅಗತ್ಯ ತಂತ್ರಜ್ಞಾನ ಅಭಿವೃದ್ಧಿಪಡಿಸಿ ನೀಡುವುದಾಗಿ ಭರವಸೆ ನೀಡಿದರು.

ಕೊರೋನಾ ಪಿಡುಗಿನಿಂದಾಗಿ ಸಾರಿಗೆ ಕ್ಷೇತ್ರ ಸಂಕಷ್ಟಕ್ಕೆ ತುತ್ತಾಗಿದೆ. ಮುಂಬರುವ ದಿನಗಳಲ್ಲಿ ಇದರಿಂದ ಚೇತರಿಸಿಕೊಳ್ಳಲು ಬಾಹ್ಯಾಕಾಶ ತಂತ್ರಜ್ಞಾನ ಬಳಸಿಕೊಳ್ಳುವ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ADVERTISEMENT

ಉಪಮುಖ್ಯಮಂತ್ರಿಯವರು ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಇಸ್ರೊ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ
ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.