
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದ ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿಯನ್ನು ಪುನರಾರಂಭಿಸುವುದಾಗಿ ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು.
ಶಾಸಕ ರವಿಸುಬ್ರಮಣ್ಯ ಹಾಗೂ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ನೇತೃತ್ವದಲ್ಲಿ ಬಂದ್ ಆಗಿರುವ ಅಶೋಕ ನಗರ ಅಂಚೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ತೇಜಸ್ವಿ ಅವರು ಪ್ರತಿಭಟನಕಾರರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.
‘ಸ್ಥಳೀಯರ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ವಿಷಯನ್ನು ಕೇಂದ್ರ ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಗೊಳಿಸಲಾಗುವುದು’ ಎಂದು ಹೇಳಿದರು.
ಅಂಚೆ ಇಲಾಖೆ ಅಧಿಕಾರಿಗಳು ಮತ್ತು ಬಸವನಗುಡಿಯ ನಾಗರಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.