ADVERTISEMENT

ಖಾಲಿ ಟ್ರಂಕ್ ಹಿಡಿದು ಪ್ರತಿಭಟಿಸಲು ಮುಂದಾದ ಸಂಸದ ತೇಜಸ್ವಿ ಸೂರ್ಯ ಬಂಧನ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 5:33 IST
Last Updated 9 ಫೆಬ್ರುವರಿ 2026, 5:33 IST
<div class="paragraphs"><p>ತೇಜಸ್ವಿ ಸೂರ್ಯ</p></div>

ತೇಜಸ್ವಿ ಸೂರ್ಯ

   

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ, ಖಜಾನೆ ಖಾಲಿಯಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ನ್ಯಾಷನಲ್ ಕಾಲೇಜು ಮೆಟ್ರೊ ಬಳಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಪೊಲೀಸ್ ಅಧಿಕಾರಿಗಳು ಸೂರ್ಯ ಅವರನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.

ADVERTISEMENT

ಮೆಟ್ರೊ ಬಳಿ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಅವರನ್ನು ತಡೆದಿದ್ದಾರೆ. ಖಾಲಿ ಟ್ರಂಕ್‌ನೊಂದಿಗೆ ತೇಜಸ್ವಿ ಸೂರ್ಯ ಪ್ರತಿಭಟಿಸಲು ಮುಂದಾಗಿದ್ದರು.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, "ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ನೀತಿ!! ​ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಖಾಲಿ ಟ್ರಂಕ್ ತೋರಿಸಿ ಪ್ರತಿಭಟನೆ ಮಾಡುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡನೀಯ. ​ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕದಲ್ಲಿ ಸಂಸದರಿಗೆ ಪ್ರತಿಭಟಿಸುವ ಹಕ್ಕು ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇಂದಿನಿಂದ ನಮ್ಮ ಮೆಟ್ರೊ ಪ‍್ರಯಾಣ ದರ ಶೇ 5 ರಷ್ಟು ಹೆಚ್ಚಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ತಾತ್ಕಾಲಿಕ ತಡೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.