ADVERTISEMENT

ಬೆಂಗಳೂರಿನಲ್ಲಿ ತಾಪಮಾನ ಏರಿಕೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 15:47 IST
Last Updated 29 ಮಾರ್ಚ್ 2024, 15:47 IST
ತಾಪಮಾನ
ತಾಪಮಾನ   

ಬೆಂಗಳೂರು: ನಗರದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆ ಪ್ರಕಾರ ಶುಕ್ರವಾರ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. 

ಇದು ಕಳೆದ ಐದು ವರ್ಷಗಳಲ್ಲಿ ಮಾರ್ಚ್‌ 29ರಂದು ವರದಿಯಾದ ಗರಿಷ್ಠ ಉಷ್ಣಾಂಶವಾಗಿದೆ. ಕಳೆದ 10 ವರ್ಷಗಳಲ್ಲಿ ಮೂರನೇ ಹಾಗೂ 15 ವರ್ಷಗಳಲ್ಲಿ ನಾಲ್ಕನೇ ಗರಿಷ್ಠ ಉಷ್ಣಾಂಶವೂ ಇದಾಗಿದೆ ಎಂದು ಇಲಾಖೆ ತಿಳಿಸಿದೆ. 

ಕನಿಷ್ಠ ಉಷ್ಣಾಂಶವೂ ಹೆಚ್ಚಳವಾಗಿದ್ದು, 23.6 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಮುಂದಿನ ಎರಡು ದಿನಗಳು ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.