
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿಯೇ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಉಷ್ಣಾಂಶದಲ್ಲಿ ಏರಿಕೆಯಾಗಿದೆ.
ಕಲಬುರಗಿಯಲ್ಲಿ ಸೋಮವಾರ 36.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ಧಾರವಾಡದಲ್ಲಿ ಉಷ್ಣಾಂಶದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಇಲ್ಲಿ ಗರಿಷ್ಠ ಉಷ್ಣಾಂಶ 33.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಯಚೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 35.4, ಗದಗದಲ್ಲಿ 35.2, ವಿಜಯಪುರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಕಾಲ ಮೋಡ ಕವಿದ ವಾತಾವರಣ ಇರಲಿದ್ದು. ಗರಿಷ್ಠ 32, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.