ಬೆಂಗಳೂರು: ದೇವಸ್ಥಾನಗಳು ಬಂದ್ ಆಗಿರುವುದರಿಂದ ಕಷ್ಟಕ್ಕೆ ಸಿಲುಕಿರುವ ಒಂದು ಲಕ್ಷ ಅರ್ಚಕರಿಗೆ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಅರ್ಚಕರ, ಆಗಮೀಕರ ಒಕ್ಕೂಟ ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಕೊರೊನಾ ಭೀತಿಯಿಂದಾಗಿ ಮುಜರಾಯಿ ಇಲಾಖೆಗೆ ಒಳಪಟ್ಟ ‘ಸಿ’ ದರ್ಜೆಯ 35 ಸಾವಿರ ದೇವಸ್ಥಾನಗಳು ಬಂದ್ ಆಗಿವೆ. ಇಲ್ಲಿ 1 ಲಕ್ಷ ಅರ್ಚಕರು ಕೆಲಸ ಮಾಡುತ್ತಿದ್ದು ಅವರು ಜೀವನ ನಡೆಸುವುದೇ ಕಷ್ಟವಾಗಿದೆ. ಅರ್ಚಕರು ಹಾಗೂ ಅವರ ಕುಟುಂಬದ ಜೀವನ ನಿರ್ವಹಣೆಗೆ ಸರ್ಕಾರ ನೆರವು ನೀಡಬೇಕು ಎಂದುಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮೀಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್.ದೀಕ್ಷಿತ್ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಲಾಕ್‌ಡೌನ್ ಕೊನೆಗೊಂಡು ದೇವಸ್ಥಾನಗಳು ಮತ್ತೆ ಎಂದಿನಂತೆ ಕಾರ್ಯಾಚರಿಸುವವರೆಗೆ ತಾತ್ಕಾಲಿಕ ಪರಿಹಾರ ಒದಗಿಸಬೇಕು ಎಂದು ಅವರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.