ADVERTISEMENT

ಪಠ್ಯಪುಸ್ತಕ ಬೆಲೆ ಹೆಚ್ಚಳಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 13 ಮೇ 2019, 19:57 IST
Last Updated 13 ಮೇ 2019, 19:57 IST

ಬೆಂಗಳೂರು:‍ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯಪುಸ್ತಕಗಳ ದರವನ್ನು ಹೆಚ್ಚಿಸಿರುವುದಕ್ಕೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸಂಘಟಿತ ಆಡಳಿತ ಒಕ್ಕೂಟಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ವಾಪಸ್‌ ಪಡೆಯಬೇಕೆಂದು ಆಗ್ರಹಿಸಿದೆ.

ಈ ಸಂಬಂಧ ಒಕ್ಕೂಟವು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದು, ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ ವರ್ಷದೊಳಗೆ ಪಠ್ಯ ಪುಸ್ತಕಗಳ ಬೆಲೆಯನ್ನು ಶೇ 20ರಷ್ಟು ಹೆಚ್ಚಿಸಿರುವುದು ಸರಿಯಲ್ಲ ಎಂದು ತಿಳಿಸಿದೆ.

ಶಾಲಾ ಆಡಳಿತ ಮಂಡಳಿಗಳು ಈಗಾಗಲೇ ಪೋಷಕರಿಂದ ಶುಲ್ಕ ಪಡೆದಿದ್ದು, ಅವರಿಂದ ಮತ್ತೆ ಶುಲ್ಕ ಪಡೆಯುವಂತೆ ಮನವೊಲಿಸುವುದು ಕಷ್ಟ.ಸೊಸೈಟಿಯು ಶಾಲೆಗಳಿಗೆ ತಿಳಿಸದೆಯೇ ಹೊಸ ದರವನ್ನು ಪ್ರಕಟಿಸಿದ್ದು, ಇದರಿಂದ ಪೋಷಕರಿಗೆ ಮತ್ತು ಶಾಲಾ ಆಡಳಿತಕ್ಕೆ ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ADVERTISEMENT

ಹೆಚ್ಚಿಸಿದ ದರವನ್ನು ವಾಪಸ್‌ ಪಡೆಯದೆ ಇದ್ದರೆ ಕಾನೂನು ಕ್ರಮಕ್ಕೂ ಮುಂದಾಗಬೇಕಾಗಬಹುದು ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.