ADVERTISEMENT

‘ಕುವೆಂಪು ಪಠ್ಯ ಪರಿಷ್ಕರಣೆ ಮಾಡಿಲ್ಲ’

​ಪ್ರಜಾವಾಣಿ ವಾರ್ತೆ
Published 24 ಮೇ 2022, 20:15 IST
Last Updated 24 ಮೇ 2022, 20:15 IST

ಬೆಂಗಳೂರು: ‘ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕದಲ್ಲಿ ಕುವೆಂಪು ಅವರ ಪಠ್ಯವನ್ನು ಪರಿಷ್ಕರಣೆ ಮಾಡಿಲ್ಲ’ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘ ಸ್ಪಷ್ಟಪಡಿಸಿದೆ.

‘ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಎಂಬ ಸುದ್ದಿಗಳು ಪ್ರಕಟವಾಗುತ್ತಿವೆ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯು 2017–18ನೇ ಸಾಲಿನಲ್ಲಿ ಪರಿಷ್ಕರಿಸಿದ್ದ ಪಠ್ಯಪುಸ್ತಕದಲ್ಲಿ ‘ಪ್ರತಿಯೊಬ್ಬರೂ ವಿಶಿಷ್ಟ’ ಎಂಬ ಪಾಠದಲ್ಲಿ ‘ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ’ ಶೀರ್ಷಿಕೆಯಡಿ ಇದ್ದ 9 ಸಾಲಗಳ ವಿಷಯಾಂಶವನ್ನು ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಸಲಾಗಿದೆ’ ಎಂದು ಸಂಘ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT