ADVERTISEMENT

ಸಾಧಕ ವಿದ್ಯಾರ್ಥಿಗಳ ಜೊತೆ ರಾಜ್ಯಪಾಲ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 20:12 IST
Last Updated 29 ನವೆಂಬರ್ 2021, 20:12 IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಚಿಲ್ಡ್ರನ್ ಸ್ಪೇಸ್ ಕ್ಲಬ್ ಆಫ್ ಇಂಡಿಯಾದ ಸಂಸ್ಥಾಪಕರಾದ ಗುಂಡ್ಲಮಡಗು ಶಾಂತಾ ಮೂರ್ತಿ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಚಿಲ್ಡ್ರನ್ ಸ್ಪೇಸ್ ಕ್ಲಬ್ ಆಫ್ ಇಂಡಿಯಾದ ಸಂಸ್ಥಾಪಕರಾದ ಗುಂಡ್ಲಮಡಗು ಶಾಂತಾ ಮೂರ್ತಿ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು   

ಬೆಂಗಳೂರು: ‘ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸುವ ದೊಡ್ಡ ಹೊಣೆಗಾರಿಕೆ ಮಕ್ಕಳಲ್ಲಿದೆ. ಹೀಗಾಗಿ, ಮಕ್ಕಳಿಗೆ ಮೌಲ್ಯಾಧರಿತ ಶಿಕ್ಷಣ ನೀಡಬೇಕಿದೆ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಚಿಲ್ಡ್ರನ್ಸ್ಪೇಸ್ ಕ್ಲಬ್ ಆಫ್ ಇಂಡಿಯಾದ ಸಂಸ್ಥಾಪಕರಾದ ಗುಂಡ್ಲಮಡಗು ಶಾಂತಾ ಮೂರ್ತಿ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ತಮ್ಮ ಪೋಷಕರ ಜೊತೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದರು.

ಈ ವೇಳೆ ಮಾತನಾಡಿದ ಅವರು, ‘ಮಕ್ಕಳಿಗೆ ಪ್ರೋತ್ಸಾಹ ನೀಡಿ, ಅವರ ಬೆಳವಣಿಗೆಯನ್ನು ಹತ್ತಿರದಿಂದ ನೋಡಿ ಸಂಭ್ರಮಿಸುವುದು ಬದುಕಿನ ಸುಂದರ ಕ್ಷಣಗಳು’ ಎಂದೂ ಬಣ್ಣಿಸಿದರು. ಮಕ್ಕಳಿಗೆ ಕೌಶಲ ಶಿಕ್ಷಣ ನೀಡುವ ಚಿಲ್ಡ್ರನ್ ಸ್ಪೇಸ್ ಕ್ಲಬ್‌ನ ಸಾಧನೆಗೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಸಂಸ್ಥೆಯ ವಲಯ ಸಮನ್ವಯಕಾರರಾದ ವಾಸಂತಿ ಅಣ್ಣಾಮಲೈ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತರುಣ್ ಎಸ್‌., ವಿಹಾನ್ ಸತೀಶ್, ಮೇಧಾ ಉಮೇಶ್‌ ಮತ್ತು ಆರುಷಿ ದಾಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.