ADVERTISEMENT

ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ಗೆ ಡ್ರ್ಯಾಗರ್‌ನಿಂದ ಇರಿದ ಆರೋಪಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 19:33 IST
Last Updated 17 ಆಗಸ್ಟ್ 2022, 19:33 IST
   

ಬೆಂಗಳೂರು: ಆರೋಪಿಯನ್ನು ಪೊಲೀಸ್‌ ಠಾಣೆಗೆ ಕರೆತರಲು ತೆರಳಿದ್ದ ವೇಳೆ ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ ವಿನುತಾ (45) ಅವರಿಗೆ ಆರೋಪಿ ಡ್ರ್ಯಾಗರ್‌ನಿಂದ ಇರಿದ ಘಟನೆ ಎಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಶೇಕ್ ಶರೀಫ್ (25) ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ. ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ. ನ್ಯಾಯಾಲಯಕ್ಕೆ ವಿಚಾರಣೆಗೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಸುಳಿವು ಪಡೆದ ಪೊಲೀಸರ ತಂಡವು ಠಾಣೆಗೆ ಕರೆತರಲು ತೆರಳಿದ್ದ ವೇಳೆ ಡ್ರ್ಯಾಗರ್‌ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದ. ವಿನುತಾ ಅವರ ಜತೆಗಿದ್ದ ಪೊಲೀಸರು ಆರೋಪಿಯನ್ನು ಹಿಡಿದು ಠಾಣೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಿಳಾ ಹೆಡ್ ಕಾನ್‌ಸ್ಟೆಬಲ್‌ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.