ನಿರಂಜನಾರಾಧ್ಯ ವಿ.ಪಿ.
ಬೆಂಗಳೂರು: ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು, ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ಲೇಖಕರು, ಸಾಹಿತಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ.
‘ತಪ್ಪು ಮಾಡಿದವರಿಗೆ ನೆಲದ ಕಾನೂನಿನ ರೀತಿ ಶಿಕ್ಷೆಯಾಗಬೇಕು. ಹಾಗೆಯೇ, ಅದನ್ನು ರಾಜಕೀಯವಾಗಿ ಬಳಸಿಕೊಂಡು ವಾಮ ಮಾರ್ಗದಿಂದ ಚುನಾಯಿತ ಸರ್ಕಾರಗಳನ್ನು ಬೀಳಿಸುವ ಎಲ್ಲ ಬಗೆಯ ಹುನ್ನಾರಗಳನ್ನು ಬಹಿರಂಗಗೊಳಿಸಬೇಕಿದೆ ಎಂದು ನಿರಂಜನಾರಾಧ್ಯ ಪಿ.ವಿ, ಬಸವರಾಜ ಸೂಳಿಭಾವಿ, ರಂಜಾನ್ ದರ್ಗಾ, ಡಾ. ಎಚ್.ಎಸ್. ಅನುಪಮಾ ಕವಲಕ್ಕಿ, ನಾ. ದಿವಾಕರ, ಡಿ.ಉಮಾಪತಿ, ವಿಜಯಾ, ಎಂ.ಅಬ್ದುಲ್ ರೆಹಮಾನ್ ಪಾಷ, ಜಿ.ಪಿ. ಬಸವರಾಜು ಮತ್ತಿತರರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
‘ಕಾಂಗ್ರೆಸ್ ಭ್ರಷ್ಟಾಚಾರ ಮುಕ್ತ ಜನಪರ ಆಡಳಿತ ನಡೆಸಲು ಪ್ರಾಮಾಣಿಕ ಪ್ರಯತ್ನಿಸುವುದು ಇಂದಿನ ತುರ್ತು ಅಗತ್ಯವಾಗಿದ್ದು, ಇದು ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಏಕೈಕ ಮಾರ್ಗವೂ ಆಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.