ADVERTISEMENT

ವಿಪತ್ತು ನಿಧಿ ಸ್ಥಾಪಿಸಲು ಸರ್ಕಾರಕ್ಕೆ ಮನಸಿಲ್ಲ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 18:43 IST
Last Updated 27 ಜನವರಿ 2021, 18:43 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಾದ 13 ವರ್ಷಗಳ ನಂತರವೂ ವಿಪತ್ತು ನಿಧಿ ಸ್ಥಾಪಿಸಲು ರಾಜ್ಯ ಸರ್ಕಾರಕ್ಕೆ ಮನಸಿಲ್ಲ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

‘ಮುಂದಿನ ಹಣಕಾಸು ವರ್ಷದಲ್ಲಿ ಈ ನಿಧಿ ಸ್ಥಾಪಿಸಲಾಗುವುದು’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸಲ್ಲಿಸಿದ್ದ ಅಫಿಡವಿಟ್ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಅಭಿಪ್ರಾಯಪಟ್ಟಿತು.

‘ನಿಧಿಯನ್ನು ಮುಂದಿನ ವರ್ಷ ಸ್ಥಾಪಿಸಲಾಗುವುದು ಎಂದು ಸರ್ಕಾರ ಹೇಳುವುದು ತರವಲ್ಲ. ಎರಡನೆಯದಾಗಿ ಇದು ಸೆಕ್ಷನ್ 48ರ ನಿಬಂಧನೆಗಳಿಗೆ ವಿರುದ್ಧವಾಗಿದೆ’ ಎಂದು ಪೀಠ ಹೇಳಿತು.

ADVERTISEMENT

‘ಈ ಕಾಯ್ದೆಯ ನಿಬಂಧನೆಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡುವ ಆಯ್ಕೆಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಬೇಕಾಗುತ್ತದೆ. ಇನ್ನೂ ಬಜೆಟ್ ಮಂಡಿಸದ ಕಾರಣ ಅದಕ್ಕೆ ಇನ್ನೂ ಸಮಯವಿದೆ’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.