ADVERTISEMENT

ಪಿಎಂ ಕೇರ್ಸ್ ಯೋಜನೆಯಡಿ ಐಸಿಯು ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 26 ಮೇ 2021, 21:48 IST
Last Updated 26 ಮೇ 2021, 21:48 IST
ಸಚಿವ ಡಾ.ಕೆ.ಸುಧಾಕರ್ ಅವರು ಐಸಿಯು ವಾರ್ಡ್ ಉದ್ಘಾಟಿಸಿದರು. ಸಚಿವ ಬೈರತಿ ಬಸವರಾಜ, ಜಿಲ್ಲಾಧಿಕಾರಿ ಜೆ. ಮಂಜುನಾಥ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ಬಿಬಿಎಂಪಿ ಮಾಜಿ ಸದಸ್ಯರಾದ ಜಯಪ್ರಕಾಶ್, ಎಂ.ಎನ್.ಶ್ರೀಕಾಂತ್, ಪಿ.ಜೆ.ಅಂತೋಣಿ ಸ್ವಾಮಿ ಇದ್ದರು.
ಸಚಿವ ಡಾ.ಕೆ.ಸುಧಾಕರ್ ಅವರು ಐಸಿಯು ವಾರ್ಡ್ ಉದ್ಘಾಟಿಸಿದರು. ಸಚಿವ ಬೈರತಿ ಬಸವರಾಜ, ಜಿಲ್ಲಾಧಿಕಾರಿ ಜೆ. ಮಂಜುನಾಥ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ಬಿಬಿಎಂಪಿ ಮಾಜಿ ಸದಸ್ಯರಾದ ಜಯಪ್ರಕಾಶ್, ಎಂ.ಎನ್.ಶ್ರೀಕಾಂತ್, ಪಿ.ಜೆ.ಅಂತೋಣಿ ಸ್ವಾಮಿ ಇದ್ದರು.   

ಕೆ.ಆರ್.ಪುರ: 'ಪಿಎಂ ಕೇರ್ಸ್ ಯೋಜನೆಯಡಿ ಬಂದಿರುವ ವೆಂಟಿಲೇಟರ್‌ಗಳನ್ನು ಒಳಗೊಂಡ ಆರು ಹೊಸ ಐಸಿಯು ವಾರ್ಡ್ ಗಳನ್ನು ಚಾಲನೆ ನೀಡಿದ್ದೇವೆ. ಈ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಯಾವುದೆ ಸಾವು ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿ' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕ್ಷೇತ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹಿತ ಐಸಿಯು ವಾರ್ಡ್ ಗಳಿಗೆ ಚಾಲನೆ ನೀಡಿ, ಆಶಾ ಕಾರ್ಯಕರ್ತೆಯರಿಗೆ ವೈದ್ಯಕೀಯ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

ಕೆ.ಆರ್.ಪುರ, ಮಹದೇವಪುರ, ಸಿ.ವಿ.ರಾಮನ್‌ನಗರ ಸುತ್ತಮುತ್ತಲ ಕ್ಷೇತ್ರಗಳಿಗೆ ಈ ಆಸ್ಪತ್ರೆ ಪ್ರಮುಖವಾಗಿದೆ. ಈ ಆಸ್ಪತ್ರೆಯನ್ನು ಅಭಿವೃದ್ಧಿ ಮಾಡಿ 100 ಹಾಸಿಗೆಗಳಿಂದ 200 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುವುದು. ಜೊತೆಗೆ, ಐಟಿಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮಕ್ಕಳ ಆಸ್ಪತ್ರೆಯಾಗಿ ರೂಪಾಂತರ ಮಾಡಿ ಅಭಿವೃದ್ಧಿಪಡಿಸುತ್ತೇವೆ ಎಂದು ಸುಧಾಕರ್ಹೇಳಿದರು.

ADVERTISEMENT

ನಗರಾಭಿವೃದ್ಧಿ ಸಚಿವ‌ ಬೈರತಿ ಬಸವರಾಜ ಮಾತನಾಡಿ, ’ಆರು ಐಸಿಯು ವಾರ್ಡ್‌ಗಳನ್ನು ಸಾರ್ವಜನಿಕರಿಗೆ ಸಮರ್ಪಣೆ ಮಾಡಿದ್ದೇವೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿಯೂ ಹಾದು ಹೋಗುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿರುತ್ತವೆ. ಈ ಆಸ್ಪತ್ರೆಯನ್ನು 200 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಿ ಎಂದು ಮನವಿ ಮಾಡಿದ್ದೇನೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.