
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ವಿಧಾನಸೌಧ ಲೇಔಟ್‌ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಮುನಿರುದ್ದೀನ್ ಖಾನ್ ಬಂಧಿತ. ಈತ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ. ಮನೆಯ ಎದುರು ಬಿದ್ದಿದ್ದ ಬಾಕ್ಸ್ ಅನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದರು. ಆಗ ಯುವತಿಯನ್ನು ಆರೋಪಿ ಹಿಂಬಾಲಿಸಿಕೊಂಡು ಬಂದಿದ್ದ. ನಂತರ, ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ಬಳಿಕ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡಿದ್ದ ಎಂದು ಮೂಲಗಳು ಹೇಳಿವೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.