
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಎಂಜಿ ರಸ್ತೆ ಬಳಿ ತುರ್ತು ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಇಂದಿರಾನಗರ ನಡುವಿನ ಮೆಟ್ರೊ ರೈಲು ಸಂಚಾರ ಭಾನುವಾರ ಬೆಳಗ್ಗೆ 7.30ರವರೆಗೆ ಲಭ್ಯವಿರಲಿಲ್ಲ.
ಎಲ್ಲಾ ಇತರ ಮಾರ್ಗಗಳಲ್ಲಿ ರೈಲು ಸೇವೆಗಳು ನಿಗದಿತ ಸಮಯದಂತೆ ಬೆಳಿಗ್ಗೆ 7 ರಿಂದ ಪ್ರಾರಂಭವಾದವು. ಅನುಕೂಲತೆಗಾಗಿ ವಿಷಾದಿಸುತ್ತೇವೆ. ಸಾರ್ವಜನಿಕರು ಸಹಕರಿಸ ಬೇಕೆಂದು ಮೆಟ್ರೊ ರೈ;ಲು ನಿಗಮ ಹೇಳಿದೆ
ಸಂಪೂರ್ಣ ನೇರಳೆ ಮಾರ್ಗದಲ್ಲಿ ಎಂದಿನಂತೆ ವಾಣಿಜ್ಯ ಸೇವೆಯು ಬೆಳಿಗ್ಗೆ 7.50ರಿಂದ ಪ್ರಾರಂಭಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.