ADVERTISEMENT

ತನಿಖೆಗೆ ರಾಜ್ಯ ಪೊಲೀಸರ ಸಹಕಾರ ಬೇಕು: ಎನ್‌ಐಎ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 22:20 IST
Last Updated 21 ಸೆಪ್ಟೆಂಬರ್ 2020, 22:20 IST

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ತನಿಖೆಯನ್ನು ರಾಜ್ಯ ಪೊಲೀಸರೇ ಮುಂದುವರಿಸಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ.

‌ಗಲಭೆ ಕುರಿತ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಬೆಂಗಳೂರಿನಲ್ಲಿ ಎನ್‌ಐಎ ಕಚೇರಿ ಇದೆ. ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್,‌ ಕಾನ್‌ಸ್ಟೆಬಲ್ ಮತ್ತು ಡಾಟಾ ಎಂಟ್ರಿ ಆಪರೇಟರ್‌ ಸೇರಿ ಐವರು ಸಿಬ್ಬಂದಿ ಮಾತ್ರ ಇದ್ದೇವೆ.ಎನ್‌ಐಎ ತನಿಖೆಗೆಸೂಕ್ತ ಪ್ರಕರಣ ಎಂದು ನ್ಯಾಯಾಲಯ ಭಾವಿಸಿದರೆ ರಾಜ್ಯ ಪೊಲೀಸರ ಸಹಾಯ ಪಡೆದು ತನಿಖೆ ನಡೆಸಲು ಪ್ರಯತ್ನಿಸಲಾಗುವುದು’ ಎಂದು ಎನ್‌ಐಎ ಅಫಿಡವಿಟ್‌ ಸಲ್ಲಿಸಿದೆ.

ADVERTISEMENT

‘ಈ ಸಂಬಂಧ ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಮತ್ತು ಎನ್‌ಐಎಗೆ ಮೂಲಸೌಕರ್ಯ ಕಲ್ಪಿಸುವ ಕಡೆಗೂ ಗಮನ ಹರಿಸಬೇಕು’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.