ADVERTISEMENT

ಜನ ಬೆಂಬಲ‌ ಇರುವವರು ಮುಖ್ಯಮಂತ್ರಿ ಆಗುತ್ತಾರೆ: ಜಮೀರ್ ಅಹಮ್ಮದ್ ಖಾನ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 9:06 IST
Last Updated 2 ಜುಲೈ 2021, 9:06 IST
ಶಾಸಕ ಬಿ.ಜೆಡ್.‌ ಜಮೀರ್ ಅಹಮ್ಮದ್ ಖಾನ್
ಶಾಸಕ ಬಿ.ಜೆಡ್.‌ ಜಮೀರ್ ಅಹಮ್ಮದ್ ಖಾನ್   

ಬೆಂಗಳೂರು: 'ಜನ ಬೆಂಬಲ ಇರುವವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ಆ ಬಗ್ಗೆ ಇನ್ನು ಮಾತನಾಡುವುದಿಲ್ಲ' ಎಂದು ಕಾಂಗ್ರೆಸ್ ಶಾಸಕ ಬಿ.ಜೆಡ್.‌ ಜಮೀರ್ ಅಹಮ್ಮದ್ ಖಾನ್ ಹೇಳಿದರು.

ಸಿದ್ದರಾಮಯ್ಯ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಮಾತನಾಡದಂತೆ ನಮ್ಮ ನಾಯಕರು ಸೂಚನೆ ನೀಡಿದ್ದಾರೆ. ಆ ಬಗ್ಗೆ ಇನ್ನು ಯಾವುದೇ ಹೇಳಿಕೆಯನ್ನೂ ನಾನು ನೀಡುವುದಿಲ್ಲ' ಎಂದರು.

'ಲಿಂಗಾಯತರಲ್ಲಿ ಎಂ.ಬಿ. ಪಾಟೀಲ್, ಅಲ್ಪಸಂಖ್ಯಾತರಲ್ಲಿ ಸಿ.ಎಂ. ಇಬ್ರಾಹಿಂ ಮತ್ತು ತನ್ವೀರ್ ಸೇಠ್ ಅವರು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಅಂತಿಮವಾಗಿ ಯಾರು ಮುಖ್ಯಮಂತ್ರಿ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ' ಎಂದು ಹೇಳಿದರು.

ADVERTISEMENT

'ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಲ್ಲ. ನಾನಿನ್ನೂ ಆ ಮಟ್ಟಕ್ಕೆ ಹೋಗಿಲ್ಲ. ನನ್ನನ್ನು ಎಲ್ ಕೆಜಿ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಎಲ್‌ಕೆಜಿಯವನಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಾ' ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಜನರು ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.