ಮಹಿಳೆ ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅಮೃತಹಳ್ಳಿ ಪೊಲೀಸರು ಆರೋಪಿಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.
ಕಾವೇರಿ ಲೇಔಟ್‌ನ ನಿವಾಸಿ, ಪೇಂಟಿಂಗ್ ಕೆಲಸ ಮಾಡುತ್ತಿದ್ದ ಅಹಮದ್ ಅಜೀಜ್(28) ಕೊಲೆಯಾದವರು.
ಮೇ 8ರಂದು ತಡರಾತ್ರಿವರೆಗೂ ಅಹಮದ್ ಅಜೀಜ್ ಹಾಗೂ ಅವರ ಇಬ್ಬರು ಸ್ನೇಹಿತರು ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಮೂವರ ಮಧ್ಯೆ ಗಲಾಟೆ ನಡೆದಿತ್ತು. ಅದಾದ ಮೇಲೆ ರಸ್ತೆಯಲ್ಲಿ ನಡೆದು ಹೋಗುವಾಗ ಇಬ್ಬರು ಆರೋಪಿಗಳು ಸೇರಿಕೊಂಡು, ಅಜೀಜ್ ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜೀಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬುಧವಾರ ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.