ADVERTISEMENT

ಮೆಟ್ರೊ | ಮಹಿಳೆಯರ ಮುಂದೆ ಅಸಭ್ಯವಾಗಿ ತುರಿಸಿಕೊಂಡ ಭದ್ರತಾ ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 14:53 IST
Last Updated 20 ಮಾರ್ಚ್ 2024, 14:53 IST
ಮೆಟ್ರೊ
ಮೆಟ್ರೊ   

ಬೆಂಗಳೂರು: ಮೆಟ್ರೊ ನಿಲ್ದಾಣದಲ್ಲಿ ಮಹಿಳೆಯರ ಮುಂದೆ ಅಸಭ್ಯವಾಗಿ ತುರಿಸಿಕೊಂಡ ಆರೋಪದ ಮೇಲೆ ಮೆಟ್ರೊ ಭದ್ರತಾ ಸಿಬ್ಬಂದಿಯನ್ನು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಅಮಾನತು ಮಾಡಿದ್ದಾರೆ.

ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಭಾನುವಾರ ಮೆಟ್ರೊ ರೈಲಿಗೆ ಕಾಯುತ್ತಾ ನಿಂತಿದ್ದ ವೇಳೆ ಎದುರಿನ ಪ್ಲಾಟ್‌ಫಾರ್ಮ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ಅಸಭ್ಯವಾಗಿ ಕೆರೆದುಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT