ಕೆಂಗೇರಿ: ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಕೆಂಗೇರಿ ಉಪ ನಗರದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರ ಆರಾಧನೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಗುರು ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಎಚ್.ಎಸ್. ಸುಧೀಂದ್ರ ಕುಮಾರ್ ನೇತೃತ್ವ ವಹಿಸಿದ್ದರು.
ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದುಷಿ ಅರ್ಚನಾ ಕುಲಕರ್ಣಿ, ವಿನಯ ಕಾರ್ತಿಕ ರಾವ್, ರಾಜಶ್ರೀ ಶ್ರೀಕಾಂತ್ ಅವರಿಂದ ಕಾರ್ಯಕ್ರಮಗಳು ನಡೆಯಿತು.
ಶಾಸಕ ಎಸ್.ಟಿ. ಸೋಮಶೇಖರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಇನ್ನಿತರ ಗಣ್ಯರು ಭೇಟಿ ನೀಡಿ, ರಾಯರ ದರ್ಶನ ಪಡೆದರು. ಉತ್ತರ ಆರಾಧನೆ ದಿನ ಕೆಂಗೇರಿ ಉಪ ನಗರದ ರಾಜಬೀದಿಗಳಲ್ಲಿ ರಥೋತ್ಸವ ನೆರವೇರಿತು.
ಮಠದ ಪದಾಧಿಕಾರಿಗಳಾದ ಶ್ರೀನಿವಾಸರಾವ್, ಜಿ.ಎಸ್. ಭಾರದ್ವಾಜ್, ಜಯಸಿಂಹ, ಜಿ.ಕೆ. ಭಾರದ್ವಾಜ್, ವಿಜಯೇಂದ್ರ, ಗುರುರಾಜ ಮುಜುಂದಾರ್, ಪ್ರಶಾಂತ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.