ADVERTISEMENT

₹ 1.25 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 19:30 IST
Last Updated 21 ಅಕ್ಟೋಬರ್ 2021, 19:30 IST

ಬೆಂಗಳೂರು: ಬಾಣಸವಾಡಿ ಉಪವಿಭಾಗ ವ್ಯಾಪ್ತಿಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ನಾಲ್ವರನ್ನು ಬಂಧಿಸಿರುವ ಪೊಲೀಸರು, ₹ 1.25 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.

‘ಮನೆಯಲ್ಲಿ ಕಳ್ಳತನ ಹಾಗೂ ಸುಲಿಗೆಗೆ ಯತ್ನಿಸಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಪಿಸ್ತೂಲ್ ತೋರಿಸಿ ಆರೋಪಿಗಳು ಸುಲಿಗೆಗೆ ಯತ್ನಿಸಿದ್ದರು. ಕೃತ್ಯಕ್ಕಾಗಿ ಆರೋಪಿಗಳು, ಕದ್ದ ಕಾರು ಬಳಸಿದ್ದರು. ಅವರನ್ನು ಬಂಧಿಸಿ ಪಿಸ್ತೂಲ್ ಸಹ ಜಪ್ತಿ ಮಾಡಲಾಗಿದೆ.’

ADVERTISEMENT

‘ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನೂ ಭೇದಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.