ADVERTISEMENT

ಕಳ್ಳತನ: ಶಾಮಿಯಾನ ಕೆಲಸಗಾರರಿಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 19 ಮೇ 2022, 16:28 IST
Last Updated 19 ಮೇ 2022, 16:28 IST
ಆರೋಪಿಗಳಿಂದ ಜಪ್ತಿ ಮಾಡಲಾದ ದ್ವಿಚಕ್ರ ವಾಹನ ಹಾಗೂ ಮೊಬೈಲ್‌ಗಳು
ಆರೋಪಿಗಳಿಂದ ಜಪ್ತಿ ಮಾಡಲಾದ ದ್ವಿಚಕ್ರ ವಾಹನ ಹಾಗೂ ಮೊಬೈಲ್‌ಗಳು   

ಬೆಂಗಳೂರು: ದ್ವಿಚಕ್ರ ವಾಹನ ಹಾಗೂ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಮೈಲಸಂದ್ರದ ಚೇತನ್ (19) ಹಾಗೂ ತ್ಯಾಗರಾಜನಗರದ ಗೌರವ್ (19) ಬಂಧಿತರು. ಇವರಿಂದ ₹ 2.50 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ ಹಾಗೂ 6 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಶಾಮಿಯಾನ ಅಳವಡಿಸುವ ಕೆಲಸ ಮಾಡುತ್ತಿದ್ದ ಆರೋಪಿಗಳು, ಐಷಾರಾಮಿ ಜೀವನ ನಡೆಸಲು ಬಯಸುತ್ತಿದ್ದರು. ಆದರೆ, ಸಂಬಳ ಸಾಲುತ್ತಿರಲಿಲ್ಲ. ಹೀಗಾಗಿ, ಕಳ್ಳತನ ಮಾಡಲು ಮುಂದಾಗಿದ್ದರು.’

ADVERTISEMENT

‘ಸಾರ್ವಜನಿಕ ಪ್ರದೇಶ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿ ಮೊಬೈಲ್ ಕಿತ್ತೊಯ್ಯುತ್ತಿದ್ದರು’ ಎಂದೂ ತಿಳಿಸಿದರು.

‘ಠಾಣೆ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ, ಮೇ 16ರಂದು ರಾತ್ರಿ ಕಳ್ಳತನ ಆಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ವಿಚಾರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದರು. ಆರೋಪಿ ಚೇತನ್, ಈ ಹಿಂದೆಯೂ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಜೈಲಿಗೂ ಹೋಗಿ ಜಾಮೀನು ಮೇಲೆ ಹೊರ ಬಂದಿದ್ದ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.