ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಸವನಗುಡಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹ 3 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಠಾಣಾ ವ್ಯಾಪ್ತಿಯ ಮಲ್ಲಿಕರ್ಜುನ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನವನ್ನು ಜೂನ್ 6ರಂದು ಕಳವು ಮಾಡಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಪ್ಯಾಲೇಸ್ ಗುಟ್ಟಹಳ್ಳಿಯ ಅರಮನೆ ಮೈದಾನದ ಬಳಿ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದರು. ಹಲವು ಕಡೆ ವಾಹನಗಳನ್ನು ಕಳವು ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಈತನ ಬಂಧನದಿಂದ ಬಸವನಗುಡಿ ಪೊಲೀಸ್ ಠಾಣೆ , ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.