ADVERTISEMENT

ಕದ್ದ ವಾಹನಗಳ ನೋಂದಣಿ ಸಂಖ್ಯೆ ಫಲಕ, ಬಣ್ಣ ಬದಲಿಸಿ ಮಾರಾಟ; ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 5:43 IST
Last Updated 26 ಜುಲೈ 2022, 5:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುವ ದ್ವಿಚಕ್ರ ವಾಹನಗಳನ್ನು ಕದ್ದು ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

‘ಲಿಂಗರಾಜಪುರ ಆಯಿಲ್ಮಿಲ್ ರಸ್ತೆಯ ಸಾಲೋಮನ್ ಅಲಿಯಾಸ್ ಅಪ್ಪಿ (20), ಮೊಹಮ್ಮದ್ ಉಮರ್ ಪಾಷಾ (19) ಹಾಗೂ ಕೊತ್ತನೂರು ನಾಗೇನಹಳ್ಳಿ ದಿಣ್ಣೆಯ ಮಣಿಕಂಠನ್ (33) ಬಂಧಿತರು. ಇವರಿಂದ ₹4 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಾಣಸವಾಡಿ ಠಾಣೆವ್ಯಾಪ್ತಿಯಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ದೂರಿನಡಿ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು. ಹಲವು ತಿಂಗಳಿನಿಂದ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳು,ಅವುಗಳ ಬಣ್ಣ ಹಾಗೂ ನೋಂದಣಿ ಸಂಖ್ಯೆ ಫಲಕ ಬದಲಿಸಿ ಕಡಿಮೆ ಬೆಲೆಗೆ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.