ADVERTISEMENT

ತಹಶೀಲ್ದಾರ್‌ ಹುದ್ದೆಗೆ ಎರವಲು ಸೇವೆ ಇಲ್ಲ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 19:31 IST
Last Updated 30 ಜುಲೈ 2021, 19:31 IST

ಬೆಂಗಳೂರು: ಗ್ರೇಡ್‌–1 ಮತ್ತು ಗ್ರೇಡ್‌–2ತಹಶೀಲ್ದಾರ್‌ ಹುದ್ದೆಗಳಿಗೆ ಬೇರೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿ
ಸುವುದನ್ನು ನಿರ್ಬಂಧಿಸಿ ರಾಜ್ಯ ನಾಗರಿಕಸೇವಾ ನಿಯಮಗಳು ಮತ್ತು ರಾಜ್ಯಸಿವಿಲ್‌ ಸೇವಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಜಾರಿಗೊಳಿಸಿ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ.

ಕಂದಾಯ ಇಲಾಖೆಯ ಗ್ರೇಡ್– 1ಮತ್ತು ಗ್ರೇಡ್‌–2 ತಹಶೀಲ್ದಾರ್‌ ಹುದ್ದೆಗಳಿಗೆ ಅನ್ಯ ಇಲಾಖೆಗಳ ಅಧಿಕಾರಿಗಳನ್ನುಎರವಲು ಸೇವೆ ಆಧಾರದಲ್ಲಿ ನಿಯೋಜನೆಮಾಡಲಾಗುತ್ತಿತ್ತು. ಕಂದಾಯ ಇಲಾಖೆಯ ಅಧಿಕಾರಿಗಳನ್ನು ಮಾತ್ರವೇತಹಶೀಲ್ದಾರ್‌ ಹುದ್ದೆಗಳಿಗೆ ನಿಯೋಜಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು.

ತಹಶೀಲ್ದಾರ್‌ ಹುದ್ದೆಗಳಿಗೆ ಇತರ ಇಲಾಖೆಗಳ ಅಧಿಕಾರಿಗಳ ನಿಯೋಜನೆ ನಿರ್ಬಂಧಿಸಿ ಕಾಯ್ದೆ, ನಿಯಮಗಳಿಗೆ ತಿದ್ದುಪಡಿ ತರಲಾಗಿತ್ತು. ಮೇ 13ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಈ ಕುರಿತ ಆಕ್ಷೇಪಣೆ, ಸಲಹೆಗಳನ್ನು ಪರಿಗಣಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಶುಕ್ರವಾರ ಅಂತಿಮ ಅಧಿಸೂಚನೆ ಹೊರಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.