ADVERTISEMENT

ಪದವಿ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯ ಆದೇಶ ಇಲ್ಲ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 20:28 IST
Last Updated 9 ಜೂನ್ 2022, 20:28 IST

ಬೆಂಗಳೂರು: ‘ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಅಥವಾ ವಸ್ತ್ರಸಂಹಿತೆ ಕುರಿತಂತೆ ಯಾವುದೇ ಆದೇಶ ಅಥವಾ ಸುತ್ತೋಲೆ ಹೊರಡಿಸಿಲ್ಲ’ ಎಂದು ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಇಕ್ಬಾಲ್‌ ಅಹ್ಮದ್‌ ಎಂಬುವವರು ಮಾಹಿತಿ ಹಕ್ಕಿನಡಿ ಕೇಳಿದ ಮಾಹಿತಿಗೆ ಇಲಾಖೆ ಈ ಉುತ್ತರ ನೀಡಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವೇ ಅಥವಾ ಅಲ್ಲವೇ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಅವರು ಕೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT