ADVERTISEMENT

ಕುಂದಲಹಳ್ಳಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ನ ಮೊಬೈಲ್‌ ಕಸಿದು ಕಳ್ಳರು ಪರಾರಿ

​ಪ್ರಜಾವಾಣಿ ವಾರ್ತೆ
Published 26 ಮೇ 2025, 15:04 IST
Last Updated 26 ಮೇ 2025, 15:04 IST
<div class="paragraphs"><p>ರಾಯಿಟರ್ಸ್ ಚಿತ್ರ</p></div>
   

ರಾಯಿಟರ್ಸ್ ಚಿತ್ರ

ಬೆಂಗಳೂರು: ಕೆಲಸ ಮುಗಿದ ಬಳಿಕ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸಾಫ್ಟ್‌ವೇರ್ ಎಂಜಿನಿಯರ್‌ ಒಬ್ಬರ ಮೊಬೈಲ್ ಅನ್ನು ಕಳ್ಳರು ಕಸಿದುಕೊಂಡು ಪರಾರಿಯಾದ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕೆಲಸ ಮುಗಿಸಿಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಂದಲಹಳ್ಳಿಯ ನಿವಾಸಿ, ಟೆಕಿ ಯಶವಂತ್‌ ಅವರು ರಸ್ತೆಬದಿಯಲ್ಲಿ ಸಾಗುತ್ತಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಮೊಬೈಲ್‌ ಕಸಿದುಕೊಂಡು ಪರಾರಿ ಆಗಿದ್ದಾರೆ.

ADVERTISEMENT

‘ಮೆಟ್ರೊದಿಂದ ಇಳಿದು ಮನೆಯತ್ತ ಸಾಗುತ್ತಿದ್ದೆ. ಮೆಟ್ರೊ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಬೀದಿದೀಪಗಳು ಇರಲಿಲ್ಲ. ಅಲ್ಲಿ ಕತ್ತಲು ಆವರಿಸಿತ್ತು. ಬೈಕ್‌ನಲ್ಲಿ ಬಂದಿದ್ದ ಕಳ್ಳರು ಮೊಬೈಲ್‌ ಕಸಿದುಕೊಂಡು ಹೋಗಿದ್ದಾರೆ ಎಂಬುದಾಗಿ ಯಶವಂತ್ ಅವರು ದೂರು ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.