ADVERTISEMENT

ತಿಮ್ಮಪ್ಪ, ಸೀತಾರಾಮುಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 15:54 IST
Last Updated 3 ಜೂನ್ 2025, 15:54 IST
ಎಂ.ಟಿ.ತಿಮ್ಮಪ್ಪ
ಎಂ.ಟಿ.ತಿಮ್ಮಪ್ಪ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಿಬ್ಬಂದಿಗೆ ನೀಡುವ ‘ಶ್ರೀಮತಿ ವಿ.ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ಪ್ರಶಸ್ತಿ’ಗೆ ಎಂ.ಟಿ.ತಿಮ್ಮಪ್ಪ ಹಾಗೂ ‘ಶ್ರೀಮತಿ ಎಸ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ’ಗೆ ಜಿ.ಸೀತಾರಾಮು ಆಯ್ಕೆಯಾಗಿದ್ದಾರೆ. 

ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಎಂ.ಜಿ.ನಾಗರಾಜ್ ಹಾಗೂ ಎಸ್.ರಮಾದೇವಿ ವಿಶ್ವೇಶ್ವರಯ್ಯ ಅವರು ಈ ದತ್ತಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದಾರೆ. ಕನಿಷ್ಠ 10 ವರ್ಷಗಳು ಪರಿಷತ್ತಿನಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ತಿಮ್ಮಪ್ಪ ಅವರು 29 ವರ್ಷಗಳಿಂದ ಹಾಗೂ ಸೀತಾರಾಮು ಅವರು 25 ವರ್ಷಗಳಿಂದ ಪರಿಷತ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 

ADVERTISEMENT

ಇದೇ 4ರಂದು ಸಂಜೆ 5 ಗಂಟೆಗೆ ಕಸಾಪದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯುವ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. 

ಜಿ.ಸೀತಾರಾಮು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.