ADVERTISEMENT

ವಕೀಲ ಜಗದೀಶ್‌ಗೆ ಬೆದರಿಕೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 19:54 IST
Last Updated 8 ಜುಲೈ 2025, 19:54 IST
ಜಗದೀಶ್‌ 
ಜಗದೀಶ್‌    

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ವಕೀಲ ಕೆ.ಎನ್. ಜಗದೀಶ್‌ ಕುಮಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧ ಅಪರಿಚಿತ ಆಟೊ ಚಾಲಕನ ವಿರುದ್ಧ ಈಶಾನ್ಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರದಲ್ಲಿ ಅನಧಿಕೃತ ಆಟೊಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಾಲತಾಣಗಳ ಮೂಲಕ ಧ್ವನಿ ಎತ್ತಿದ ಪರಿಣಾಮ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸರು 900 ಪ್ರಕರಣ ದಾಖಲಿಸಿ, 500ಕ್ಕೂ ಹೆಚ್ಚಯ ಆಟೊ ಜಪ್ತಿ ಮಾಡಿದ್ದಾರೆ. ಆಟೊ ಚಾಲಕನೊಬ್ಬ ನನ್ನ ಮತ್ತು ಕುಟುಂಬದ ವಿರುದ್ಧ ಅಸಭ್ಯ ಪದ ಬಳಸಿ, ಜೀವ ಬೆದರಿಕೆ ಹಾಕಿದ್ದಾನೆ’ ಎಂದು ಜಗದೀಶ್ ದೂರಿನಲ್ಲಿ ತಿಳಿಸಿದ್ದಾರೆ.

ಆಟೊ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.