ADVERTISEMENT

11 ಬೈಕ್‌ಗಳ ಜಪ್ತಿ: ಮೂವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2023, 16:17 IST
Last Updated 23 ಆಗಸ್ಟ್ 2023, 16:17 IST
ನಿರಂಜನ್
ನಿರಂಜನ್   

ಬೆಂಗಳೂರು: ಆರ್‌.ಟಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಲ್ತಾನ್‌ ಪಾಳ್ಯದಲ್ಲಿ ಮನೆಯ ಎದುರು ನಿಲುಗಡೆ ಮಾಡಿದ್ದ ಬೈಕ್‌ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಆಲಿ, ನಿರಂಜನ್‌, ಮುಬಾರಕ್‌ ಎಂಬುವರನ್ನು ಬಂಧಿಸಲಾಗಿದೆ.

ಬಂಧಿತರಿಂದ ₹ 16.3 ಲಕ್ಷದ 72.2 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಆರೋಪಿಗಳು ಆರ್‌.ಟಿ. ನಗರ, ಜೆ.ಸಿ.ನಗರ, ಉಪ್ಪಾರಪೇಟೆ, ಕೆ.ಜಿ.ಹಳ್ಳಿ, ಪುಲಕೇಶಿನಗರ, ಬಾಗಲೂರು, ಬಾಣಸವಾಡಿ, ಜೀವನ್‌ಬಿಮಾ ನಗರ, ಹಲಸೂರು, ಹೈಗ್ರೌಂಡ್ಸ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಎದುರು ನಿಲುಗಡೆ ಮಾಡಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದರು. ಕೊಡಿಗೇಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸರ ಕಳವು ನಡೆಸಿದ್ದರು. ಒಟ್ಟು 12 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಇನ್ನು ವಿದ್ಯಾರಣ್ಯಪುರ ಪೊಲೀಸರು ಬೈಕ್‌ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹ 9 ಲಕ್ಷದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಮುಬಾರಕ್‌
ಸೈಯದ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.