ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಹೊರ ರಾಜ್ಯದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ದೂಡಿದ್ದ ಆರೋಪದ ಮೇಲೆ ಮಹಿಳೆ ಸೇರಿ ಮೂವರನ್ನು ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿಯ ಹರ್ಷ ಲೇಔಟ್‌ನ ನಾಲ್ಕನೇ ಕ್ರಾಸ್‌ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಬಂದಿತ್ತು. ಆ ಮಾಹಿತಿ ಆಧರಿಸಿ ಮನೆಯ ಮೇಲೆ ದಾಳಿ ನಡೆಸಿ ಪ್ರಮುಖ ಆರೋಪಿ ಗೌರಮ್ಮ ಸೇರಿ ಮೂವರನ್ನು ಬಂಧಿಸಲಾಯಿತು. ಹೊರ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳು ಯುವತಿಯರಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ದೂಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.