ADVERTISEMENT

ಬೆಂಗಳೂರಲ್ಲಿ ಮೂರು ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೊಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 20:12 IST
Last Updated 19 ಜೂನ್ 2025, 20:12 IST
ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೊ -2025'ದಲ್ಲಿ ಕ್ರೆಡಲ್ ಅಧ್ಯಕ್ಷ ಟಿ.ಡಿ. ರಾಜೇಗೌಡ ಹಸಿರು ಇಂಧನಕ್ಕೆ ಸಂಬಂಧಿಸಿದ ಪರಿಕರಗಳನ್ನು ವೀಕ್ಷಿಸಿದರು
ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೊ -2025'ದಲ್ಲಿ ಕ್ರೆಡಲ್ ಅಧ್ಯಕ್ಷ ಟಿ.ಡಿ. ರಾಜೇಗೌಡ ಹಸಿರು ಇಂಧನಕ್ಕೆ ಸಂಬಂಧಿಸಿದ ಪರಿಕರಗಳನ್ನು ವೀಕ್ಷಿಸಿದರು   

ಬೆಂಗಳೂರು: ‘ರಾಜ್ಯದಲ್ಲಿರುವ ಸುಸ್ಥಿರ ಇಂಧನ ನೀತಿಯಿಂದಾಗಿ ನಮ್ಮ ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಇದೆ. ಇದು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ನವೀಕರಿಸಬಹುದಾದದ ಇಂಧನ ವಲಯದಲ್ಲಿ ₹4 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲು ಕಾರಣವಾಗಿದೆ’ ಎಂದು ಕರ್ನಾಟಕ ನವೀಕರಿಸಹಬಹುದಾದ ಇಂಧನ ಅಭಿವೃದ್ಧಿ ನಿಯಮಿತ(ಕ್ರೆಡಲ್) ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

ನಗರದ ಬೆಂಗಳೂರು ಅಂತಾರಾಷ್ಟೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ 'ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೊ -2025’ರ ಐದನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಅವರು ಮಾತನಾಡಿಸಿದರು.‌

‘ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆಗಾವಾಟ್‌ ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ’ ಎಂದರು.

ADVERTISEMENT

ಮೂರು ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೊವನ್ನು ರಾಮಕೃಷ್ಣ ಆಶ್ರಮದ ವೀರೇಶಾನಂದ ಸ್ವಾಮೀಜಿ , ಪರಮಾನಂದ ಸ್ವಾಮೀಜಿ ಉದ್ಘಾಟಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಉಪಕರಣಗಳ ತಯಾರಕರ ಸಂಘದ ಸುರೇಂದ್ರ ಕುಮಾರ್, ಪ್ರೈಮ್ ಎನರ್ಜಿಯ ಉದ್ಯಮಿ ರಮೇಶ್ ಶಿವಣ್ಣ ಹಾಗೂ ಜೆಟ್ರೊ ಕಂಪನಿಯ ಜಪಾನ್ ಪ್ರತಿನಿಧಿ ತೊಷಿರೋ ಮಿಜುತಾನಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.