ADVERTISEMENT

ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 15:50 IST
Last Updated 29 ಆಗಸ್ಟ್ 2020, 15:50 IST
ಉಪಮುಖ್ಯಮಂತ್ರಿ ವಿಂದ ಎಂ ಕಾರಜೋಳ
ಉಪಮುಖ್ಯಮಂತ್ರಿ ವಿಂದ ಎಂ ಕಾರಜೋಳ   

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆಯತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, ಈ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT