ಬೆಂಗಳೂರು: ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಡಬಲ್ ಡೆಕರ್ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿ ನಡೆಸಿ ಆ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಚಾಲಕನಿಗೆ ಚಾಕು ತೋರಿಸಿ ಬೆದರಿಸಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿವಾಳದ ಸಿದ್ಧಾರ್ಥ ಕಾಲೊನಿಯ ಸಂಜಯ್ ಹಾಗೂ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ಹೇಳಿದರು.
‘ಜುಲೈ 24ರಂದು ಸಂಜೆ 6 ಗಂಟೆ ಸುಮಾರಿಗೆ ಮೇಲ್ಸೇತುವೆಯಲ್ಲಿ ಕಾರೊಂದು ಚಲಿಸುತ್ತಿತ್ತು. ಆ ಕಾರಿನ ಹಿಂದೆ ಐವರು ವ್ಹೀಲಿ ಮಾಡಿಕೊಂಡು ಬರುತ್ತಿದ್ದರು. ಆ ಕಾರಿನ ಚಾಲಕನಿಗೆ ಚಾಕು ತೋರಿಸಿ ಬೆದರಿಸಿದ ಆರೋಪಿಗಳು, ಕಾರಿಗೆ ಒದ್ದಿದ್ದಾರೆ. ಹಿಂದೆ ಮತ್ತೊಂದು ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದರು. ಆ ದೃಶ್ಯವನ್ನು ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ವ್ಹೀಲಿ ನಡೆಸುವಾಗ ಕಾರು ಅಡ್ಡಬಂತು ಎನ್ನುವ ಕಾರಣಕ್ಕೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.