ADVERTISEMENT

ನಗರದ ವಿವಿಧೆಡೆ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 19:45 IST
Last Updated 14 ಡಿಸೆಂಬರ್ 2019, 19:45 IST
   

ಬೆಂಗಳೂರು: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಶನಿವಾರ ಸಂಜೆ ಮತ್ತೆ ತಂಪೆರೆಯಿತು. ನಗರದ ವಿವಿಧೆಡೆ ಸಂಜೆ 5ರ ವೇಳೆಗೆ ಶುರುವಾದ ತುಂತುರು ಮಳೆ ರಾತ್ರಿ 9 ಗಂಟೆವರೆಗೂ ಸುರಿಯಿತು.

ಇಂದಿರಾನಗರ, ಎಂ.ಜಿ.ರಸ್ತೆ, ಹಲಸೂರು,ಶಿವಾಜಿನಗರ, ಚಾಮರಾಜಪೇಟೆ, ಜಯನಗರ, ಹನುಮಂತನಗರ, ಗಿರಿನಗರ, ಬಸವನಗುಡಿ, ವಿಜಯನಗರ, ಬಸವೇಶ್ವರನಗರ, ರಾಜಾಜಿನಗರ, ಯಶವಂತಪುರ, ಮತ್ತಿಕೆರೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಯಲಹಂಕ, ಆರ್‌.ಟಿ.ನಗರ, ಹೆಬ್ಬಾಳ, ಕೋರಮಂಗಲ, ಮಡಿವಾಳ, ಎಚ್‌ಎಸ್‌ಆರ್ ಲೇಔಟ್‌ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT