
ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ್ ನಗರದ ಮೂರನೇ ಕ್ರಾಸ್‌ನ ಬಾಡಿಗೆ ಮನೆಯಲ್ಲಿ ಟೆಕಿಯ ಮೃತದೇಹ ಪತ್ತೆ ಆಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಯುವರಾಜ್ (48) ಮೃತ ಟೆಕಿ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು, ಯುವರಾಜ್ ಅವರ ಸಹೋದರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
‘ಕೆಲವು ದಿನಗಳಿಂದ ದುರ್ವಾಸನೆ ಬರುತ್ತಿತ್ತು. ಹೆಗ್ಗಣ ಸತ್ತಿರಬಹುದೆಂದು ಆ ರಸ್ತೆಯಲ್ಲಿ ಓಡಾಡುತ್ತಿದ್ದ ಜನರು ಭಾವಿಸಿದ್ದರು. ನೀರು ತಂದು ಚರಂಡಿಗೆ ಸುರಿಯುತ್ತಿದ್ದರು. ಆದರೆ, ದುರ್ವಾಸನೆ ಹೆಚ್ಚಾದ ಬಳಿಕ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಬಸವೇಶ್ವರನಗರ ಠಾಣೆಯ ಪೊಲೀಸರು, ಮನೆಯ ಬಾಗಿಲು ಒಡೆದು ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.
‘ಯುವರಾಜ್ ಅವರು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.