ADVERTISEMENT

ಹುಲಿ, ಚಿರತೆಯ 142 ಉಗುರುಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2019, 19:20 IST
Last Updated 10 ಫೆಬ್ರುವರಿ 2019, 19:20 IST

ಬೆಂಗಳೂರು: ಬೆಲೆ ಬಾಳುವ ಹುಲಿ ಮತ್ತು ಚಿರತೆಯ ಉಗುರುಗಳನ್ನು ಮಾರಾಟ ಮಾಡಲು ನಗರಕ್ಕೆ ಬಂದಿದ್ದ ಮಂಡ್ಯ ಮೂಲದ ಮೂವರು ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 142 ಉಗುರುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಡ್ಯದ ನಾಗಮಂಗಲ ತಾಲ್ಲೂಕಿನ ತುಪ್ಪದಮೂಡು ನಿವಾಸಿ ಕವಿತ್‍ಕುಮಾರ್(23), ಗೋಪಿರಾಜ್ ಅಲಿಯಾಸ್ ಗೋಪಿ (25) ಮತ್ತು ಸಂಜಯ್ (21) ಬಂಧಿತರು.

‘ಆರೋಪಿಗಳೆಲ್ಲರೂ ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದರು. ಹೆಚ್ಚಿನ ಹಣವನ್ನು ಗಳಿಸುವ ಸಲುವಾಗಿ ಅಕ್ರಮ ದಂಧೆಗೆ ಕಾಲಿಟ್ಟರು. ಮೈಸೂರಿನ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರ ಗ್ರಾಮದ ಕೆಲ ವ್ಯಕ್ತಿಗಳು ಹುಲಿ, ಚಿರತೆಗಳನ್ನು ಕೊಂದು ಅವುಗಳ ಚರ್ಮ ಹಾಗೂ ಉಗುರುಗಳನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. ಅವರಿಗಾಗಿ ಶೋಧ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಹುಲಿ ಹಾಗೂ ಚಿರತೆ ಉಗುರುಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಪ್ರತಿ ಉಗುರಿಗೆ ₹ 2 ರಿಂದ 3 ಲಕ್ಷದಂತೆ ಮಾರಾಟ ಮಾಡುತ್ತಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.