ADVERTISEMENT

ನೆಲಮಂಗಲ: ಎಲೆಕ್ಟ್ರಿಷಿಯನ್‌ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 16:22 IST
Last Updated 10 ಸೆಪ್ಟೆಂಬರ್ 2025, 16:22 IST
ತಿಮ್ಮೇಗೌಡ
ತಿಮ್ಮೇಗೌಡ   

ನೆಲಮಂಗಲ: ತಾಲ್ಲೂಕಿನ ಟಿ.ಬೇಗೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ ತಿಮ್ಮೇಗೌಡ(38) ಅವರು ನೇಣುಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   

ಗುಬ್ಬಿಯ ತಿಮ್ಮೇಗೌಡ ಅವರು ಎಂಟು ವರ್ಷಗಳಿಂದ ಕಾಲೇಜಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಕಾಲೇಜಿನ ಇತರೆ ಉದ್ಯೋಗಿಗಳ ಜೊತೆ ವಸತಿಗೃಹದಲ್ಲಿ ವಾಸವಾಗಿದ್ದರು. ಪತ್ನಿ ಮತ್ತು ಮಕ್ಕಳು ಗುಬ್ಬಿಯಲ್ಲಿದ್ದರು.

ಬುಧವಾರ ಮಧ್ಯಾಹ್ನ 12.30ರ ಸುಮಾರಿಗೆ ತಿಮ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿತ್ತು.  ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದರು. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ADVERTISEMENT

ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಗೊತ್ತಾಗಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.