ADVERTISEMENT

ತಂಬಾಕು ನಿಯಂತ್ರಣ: ದಂಡದ ಹಣ ಬಳಕೆ ಕುರಿತು ಆರೋಗ್ಯ ಇಲಾಖೆ ಆದೇಶ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 4:33 IST
Last Updated 5 ನವೆಂಬರ್ 2025, 4:33 IST
   

ಬೆಂಗಳೂರು: ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಕೋಟ್ಪಾ) ಕಾಯ್ದೆ 2003ರ ಅಡಿ ಸಂಗ್ರಹಿಸಲಾದ ದಂಡದ ಹಣವನ್ನು ತಂಬಾಕು ನಿಯಂತ್ರಣ ಕಾರ್ಯಕ್ರಮಗಳಿಗೆ ಬಳಸಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. 

ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು, ಕೋಟ್ಪಾ ಕಾಯ್ದೆಯನ್ನು ಈ ಕಾರ್ಯಕ್ರಮದಡಿ ಅನುಷ್ಠಾನ ಮಾಡಲಾಗುತ್ತಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲು ಅವಕಾಶವಿದ್ದು, ದಂಡದ ಮೊತ್ತವು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯ ಜಂಟಿ ಖಾತೆಗೆ ಜಮಾ ಆಗಲಿದೆ. ಜಿಲ್ಲಾ ಮಟ್ಟದಲ್ಲಿ ಸಂಗ್ರಹಿಸಲಾದ ದಂಡದ ಮೊತ್ತದಲ್ಲಿ ಶೇ 70ರಷ್ಟು ಹಣವನ್ನು ತಂಬಾಕು ನಿಯಂತ್ರಣ ಚಟುವಟಿಕೆಗಳಿಗೆ ಬಳಸಿಕೊಳ್ಳಬೇಕು ಎಂದು ಹೇಳಲಾಗಿದೆ.

ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳು ಹಿಂದಿನ ಆರ್ಥಿಕ ವರ್ಷದಲ್ಲಿ ಸಂಗ್ರಹಿಸಿದ ದಂಡದ ಮೊತ್ತದ ಬಳಕೆಗಾಗಿ ವಾರ್ಷಿಕ ಕ್ರಿಯಾ ಯೋಜನೆಯನ್ನು ಅಭಿವೃದ್ಧಿಪಡಿಸಬೇಕು ಎಂದು ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.