ADVERTISEMENT

ಬೆಂಗಳೂರು: ಕೋಟಿ ಮೌಲ್ಯದ ತಂಬಾಕು ಪದಾರ್ಥ ಜಪ್ತಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 15:26 IST
Last Updated 18 ಸೆಪ್ಟೆಂಬರ್ 2025, 15:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   REUTERS/Michaela Rehle

ಬೆಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ₹1 ಕೋಟಿ ಮೌಲ್ಯದ ಪಾನ್ ಮಸಾಲಾ ಮತ್ತು ತಂಬಾಕು ಪದಾರ್ಥಗಳನ್ನು ದಕ್ಷಿಣ ವಲಯದ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸೂಕ್ತ ದಾಖಲೆಗಳು ಹಾಗೂ ಬಿಲ್ಲುಗಳು ಇಲ್ಲದೇ ತಂಬಾಕು ಪದಾರ್ಥಗಳ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.

ADVERTISEMENT

ಕಮಲಾ ಪಸಂದ್ ಪಾನ್ ಮಸಾಲಾ, ಹನ್ಸ್ ಚಾಪ್, ಚೈನಿ ಫಿಲ್ಟರ್ ತಂಬಾಕು ಮತ್ತು ಶಿಖರ್ ಪಾನ್ ಮಸಾಲಾ ಎಂಬ ಪ್ರತಿಷ್ಠಿತ ಬ್ರ್ಯಾಂಡ್‌ಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ದೆಹಲಿಯಿಂದ ಬೆಂಗಳೂರಿಗೆ ರೈಲು ಮೂಲಕ ಸಾಗಿಸಲಾಗುತ್ತಿತ್ತು. ಅವುಗಳನ್ನು ನಿಲ್ದಾಣದ ಆವರಣದಲ್ಲಿರುವ ಕೆಲ ಸರಕು ವಾಹನಗಳು ಮತ್ತು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿರುವ ಚೀಲಗಳಲ್ಲಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.