ADVERTISEMENT

ಪೊಲೀಸ್ ಸಂಸ್ಮರಣಾ ದಿನಾಚರಣೆ ಇಂದು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 1:10 IST
Last Updated 21 ಅಕ್ಟೋಬರ್ 2025, 1:10 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಮೈಸೂರು ರಸ್ತೆಯ ಸಿಎಆರ್ ಕೇಂದ್ರದಲ್ಲಿ ಮಂಗಳವಾರ ಬೆಳಿಗ್ಗೆ 8ಕ್ಕೆ ಪೊಲೀಸ್‌ ಸಂಸ್ಮರಣಾ ದಿನಾಚರಣೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ಮರಿಸುವ ಸಲುವಾಗಿ ರಾಷ್ಟ್ರದೆಲ್ಲೆಡೆ ಪ್ರತಿ ವರ್ಷ ಅ.21ರಂದು ಪೊಲೀಸ್‌ ಸಂಸ್ಮರಣಾ ದಿನ ಆಚರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.