ADVERTISEMENT

ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಶಿಕ್ಷಾರ್ಹ ಅಪರಾಧ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2023, 14:24 IST
Last Updated 27 ಅಕ್ಟೋಬರ್ 2023, 14:24 IST
<div class="paragraphs"><p>ಸಚಿವ ಈಶ್ವರ ಖಂಡ್ರೆ</p></div>

ಸಚಿವ ಈಶ್ವರ ಖಂಡ್ರೆ

   

ಬೆಂಗಳೂರು: ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಸೆಕ್ಷನ್ 43ರ ಅಡಿಯಲ್ಲಿ ನವಿಲುಗರಿಗಳಿಗೆ ವಿನಾಯಿತಿ ನೀಡಲಾಗಿದೆ. ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರ್ಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತರರಾಷ್ಟ್ರೀಯ ವ್ಯಾಪಾರದ ಸಮಾವೇಶ - ಸಿಐಟಿಇಎಸ್ ನಿಷೇಧಿಸಿದೆ. ಆದರೆ ನೈಸರ್ಗಿಕವಾಗಿ ನವಿಲುಗಳಿಂದ ಉದುರಿದ ಗರಿಗಳನ್ನು ಸಂಗ್ರಹಿಸುವುದು ಮತ್ತು ದೇಶದೊಳಗೆ ಮಾರಾಟ ಮಾಡುವುದು ಕಾನೂನುಬಾಹಿರವಲ್ಲ. ಆದರೆ ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು ಶಿಕ್ಷಾರ್ಹ ಅಪರಾಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT