ADVERTISEMENT

ಸಿಗ್ನಲ್‌ಗಳಲ್ಲಿ ಆಟಿಕೆ ಮಾರಾಟ: ವರದಿ ಸಿದ್ಧಪಡಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 22:06 IST
Last Updated 30 ನವೆಂಬರ್ 2020, 22:06 IST
ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌   

ಬೆಂಗಳೂರು: ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಆಟಿಕೆ ಮತ್ತು ಹೂವುಗಳನ್ನು ಬಲವಂತವಾಗಿ ಮಾರಾಟ ಮಾಡುತ್ತಿರುವ ಮಕ್ಕಳನ್ನು ಗುರುತಿಸುವ ಕಾರ್ಯ ಕೈಗೊಳ್ಳುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

‌ಅಂಕಿ–ಅಂಶ ಸಹಿತ ವರದಿ ಸಲ್ಲಿಸುವಂತೆ ಈ ಹಿಂದಿನ ವಿಚಾರಣೆ ವೇಳೆ ಬಿಬಿಎಂಪಿಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿತ್ತು. ವರದಿ ಸಲ್ಲಿಸಲು ಪಾಲಿಕೆ ಮತ್ತು ರಾಜ್ಯ ಸರ್ಕಾರ ವಿಫಲವಾಗಿರುವುದರಿಂದ ಪೀಠ ಈ ಆದೇಶ ನೀಡಿದೆ.

ಈ ಸಂಬಂಧ ಯೋಜನೆ ರೂಪಿಸಿ ಡಿ.22ರೊಳಗೆ ‍ಪ್ರಾಧಿಕಾರ ವರದಿ ಸಲ್ಲಿಸಬೇಕು. ಅದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರವನ್ನು ರಾಜ್ಯ ಸರ್ಕಾರ ಮತ್ತು ಪಾಲಿಕೆ ನೀಡಬೇಕು ಎಂದು ತಿಳಿಸಿತು.

ADVERTISEMENT

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಲಿಟ್ಜ್‌ಕಿಟ್ ಫೌಂಡೇಷನ್, ‘ಆಟಿಕೆ ಮಾರಾಟ ಮಾಡಿಸಲು ಮಕ್ಕಳನ್ನು ಬಲವಂತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.