ADVERTISEMENT

ಟೋಯಿಂಗ್‌ ತಾತ್ಕಾಲಿಕ ಸ್ಥಗಿತ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2022, 14:59 IST
Last Updated 2 ಫೆಬ್ರುವರಿ 2022, 14:59 IST
   

ಬೆಂಗಳೂರು: ಬೆಂಗಳೂರು ನಗರದಲ್ಲಿ ಸದ್ಯವೇ ಟೋಯಿಂಗ್‌ ಕುರಿತಂತೆ ಸರಳೀಕೃತ ವ್ಯವಸ್ಥೆ ಬರಲಿದ್ದು, ಅಲ್ಲಿಯವರೆಗೆ ಟೋಯಿಂಗ್‌ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುಗಮ ಸಂಚಾರ ವ್ಯವಸ್ಥೆ ಮತ್ತು ಟೋಯಿಂಗ್‌ ಕುರಿತಂತೆ ಪೊಲೀಸ್‌ ಅಧಿಕಾರಿಗಳ ಜತೆ ಬುಧವಾರ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಈಗ ಟೋಯಿಂಗ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸೂಕ್ತಪರಿಹಾರ ಕಂಡಕೊಳ್ಳಲು ನಿರ್ಧಾರ ಮಾಡಿದ್ದೇವೆ. ಈ ಸಂಬಂಧ ಕೆಲವು ವಿಷಯಗಳ ಬಗ್ಗೆ ಮಾತನಾಡಿದ್ದೇವೆ. ಅದನ್ನು ಮುಖ್ಯಮಂತ್ರಿಯವರ ಜತೆ ಚರ್ಚಿಸಿ, ಬಳಿಕ ಪ್ರಕಟಿಸಲಾಗುವುದು ಎಂದು ಜ್ಞಾನೇಂದ್ರ ಹೇಳಿದರು.

ADVERTISEMENT

ನಿಯಮಾವಳಿಗಳನ್ನು ಆದಷ್ಟು ಸರಳೀಕರಣ ಮಾಡುವುದರ ಜತೆಗೆ ಹೆಚ್ಚು ಪಾರದರ್ಶಕವಾಗಿ ಇರುವಂತೆ ನೋಡಿಕೊಳ್ಳಲಾಗುವುದು. ಅನಗತ್ಯ ಗೊಂದಲಗಳನ್ನು ನಿವಾರಿಸಲಾಗುವುದು. ನೋ ಪಾರ್ಕಿಂಗ್ ಫಲಕದಲ್ಲೂ ವಿಚಾರದಲ್ಲೂ ಜನಸ್ನೇಹಿ ಆಗುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.