ADVERTISEMENT

ಮಾನವ ಸರಪಳಿ ರಚಿಸಿ ಟೊಯೊಟಾ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 20:23 IST
Last Updated 25 ಡಿಸೆಂಬರ್ 2020, 20:23 IST

ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‌ ಕಾರ್ಮಿಕರ ಪ‍್ರತಿಭಟನೆಯು 47ನೇ ದಿನವೂ ಮುಂದುವರಿದಿದ್ದು, ಕಾರ್ಮಿಕರು ಶುಕ್ರವಾರ ಬೀದಿಗೆ ಇಳಿದು ಮೌನ ಪ್ರತಿಭಟನೆ ನಡೆಸಿದರು.

ಬೆಳಗ್ಗೆ ಮೈಸೂರು–ಬೆಂಗಳೂರು ಹೆದ್ದಾರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟ ನೂರಾರು ಕಾರ್ಮಿಕರು ಒಬ್ಬರಿಗೊಬ್ಬರು ಕೈ ಹಿಡಿದು ಕಾಡುಮನೆ ಪ್ರದೇಶದಿಂದ ಕಾರ್ಖಾನೆವರೆಗೂ ಸುಮಾರು ಐದಾರು ಕಿಲೋಮೀಟರ್‌ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಚ್ಎಎಲ್‌ ನೌಕರರ ಸಂಘದ ಪದಾಧಿಕಾರಿಗಳು ಟೊಯೊಟಾ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಗುರುವಾರ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್‌ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್‌ ಪಾಲ್ಗೊಂಡಿದ್ದರು. ಸರ್ಕಾರ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದ ಅವರು ಕಾರ್ಮಿಕರಿಗೆ ಅಗತ್ಯವಾದಲ್ಲಿ ಕಾನೂನು ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.