
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಪ್ರೊ. ಎಲ್.ಎಸ್. ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ವಿಮರ್ಶಕ ಟಿ.ಪಿ. ಅಶೋಕ ಮತ್ತು ‘ವಿ. ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಪತ್ರಕರ್ತೆ ನಾಗಮಣಿ ಎಸ್. ರಾವ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿವೆ. ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಫೆ.28ರಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಲೇಖಕಿ ಕೆ.ಆರ್. ಸಂಧ್ಯಾ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.