ADVERTISEMENT

ಕದ್ದ 12 ಟ್ರ್ಯಾಕ್ಟರ್‌ ಬಾಡಿಗೆ ಕೊಟ್ಟು ಹಣ ಸಂಪಾದನೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 19:30 IST
Last Updated 12 ನವೆಂಬರ್ 2020, 19:30 IST
ಬೋರೇಗೌಡ
ಬೋರೇಗೌಡ   

ಬೆಂಗಳೂರು: ಟ್ರ್ಯಾಕ್ಟರ್‌ಗಳನ್ನು ಕದ್ದು, ಅವುಗಳನ್ನೇ ರೈತರಿಗೆ ಬಾಡಿಗೆಗೆ ಕೊಟ್ಟು ಹಣ ಸಂಪಾದನೆ ಮಾಡುತ್ತಿದ್ದ ಆರೋಪಿ ಬೋರೇಗೌಡ (48) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಮಂಡ್ಯದ ಜಿ. ಕೆಬ್ಜೆಳ್ಳಿಯ ಬೋರೇಗೌಡ, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 55 ಲಕ್ಷ ಮೌಲ್ಯದ 12 ಟ್ರ್ಯಾಕ್ಟರ್‌ಗಳು, ಒಮ್ನಿ ವಾಹನ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಇದೇ 18ರಂದು ಸುಂಕದಕಟ್ಟೆಯ ಹೊಯ್ಸಳನಗರ ಉದ್ಯಾನ ಬಳಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ ಕಳವಾಗಿತ್ತು. ಈ ಬಗ್ಗೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿದ್ದ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.

ADVERTISEMENT

‘ತರಕಾರಿ ಮಾರಾಟ ಹಾಗೂ ಸಾಮಗ್ರಿ ಸಾಗಣೆ ಸೇರಿದಂತೆ ಹಲವು ಕೆಲಸಕ್ಕಾಗಿ ರೈತರು ಟ್ರ್ಯಾಕ್ಟರ್‌ ತೆಗೆದುಕೊಂಡು ನಗರಕ್ಕೆ ಬರುತ್ತಾರೆ. ಅಂಥ ರೈತರ ಟ್ರ್ಯಾಕ್ಟರ್‌ಗಳನ್ನು ಆರೋಪಿ ಕದಿಯುತ್ತಿದ್ದ. ಟ್ರ್ಯಾಕ್ಟರ್‌ಗಳನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಆರೋಪಿ, ಬೇರೆ ರೈತರಿಗೆ ಬಾಡಿಗೆಗೆ ಕೊಡುತ್ತಿದ್ದ. ಅದರಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.