ADVERTISEMENT

ಸಿಐಟಿಯು ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 15:35 IST
Last Updated 18 ನವೆಂಬರ್ 2025, 15:35 IST
<div class="paragraphs"><p> ಸಿಐಟಿಯು</p></div>

ಸಿಐಟಿಯು

   

ಬೆಂಗಳೂರು: ಸೆಂಟರ್ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ರಾಜ್ಯ ಸಮಿತಿ ಅಧ್ಯಕ್ಷರಾಗಿ ಮೀನಾಕ್ಷಿ ಸುಂದರಂ, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವರಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ಧಾರೆ.

ಹಾಸನದಲ್ಲಿ ನಡೆದ ಸಿಐಟಿಯು ರಾಜ್ಯ ಸಮ್ಮೇಳನದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ಪಿ.ಕೆ.ಪರಮೇಶ್ವರ್‌ ಅವರು ಸಮಿತಿಯ ಖಜಾಂಚಿಯಾಗಿದ್ದಾರೆ.

ADVERTISEMENT

ಸಮಿತಿಯಲ್ಲಿ 14 ಉಪಾಧ್ಯಕ್ಷರು, 20 ಕಾರ್ಯದರ್ಶಿಗಳಿದ್ದು, ಏಳು ಮಂದಿ ಮಹಿಳೆಯರಿಗೂ ಅವಕಾಶ ನೀಡಲಾಗಿದೆ.

₹36 ಸಾವಿರ ಕನಿಷ್ಠ ವೇತನ ನೀಡಬೇಕು. ರೈತರ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ನಿಗದಿ ಮಾಡಬೇಕು. ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಬಾರದು. ದುಡಿಯುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಸಿಐಟಿಯು ಸಮ್ಮೇಳನದಲ್ಲಿ ಅಂಗೀಕರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.