ADVERTISEMENT

ಸಂಚಾರ ನಿಯಮ: 50 ಸಿಗ್ನಲ್‌ಗಳಲ್ಲಿ ಎಎನ್‌ಪಿಆರ್ ಕ್ಯಾಮೆರಾ

ಫೋಟೊ ಸಮೇತ ಉಲ್ಲಂಘನೆ ಸೆರೆ: ಮಾಲೀಕರ ಮೊಬೈಲ್‌ಗೆ ದಂಡದ ನೋಟಿಸ್ ಸಂದೇಶ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 19:38 IST
Last Updated 7 ಡಿಸೆಂಬರ್ 2022, 19:38 IST
ನಗರದ ಕಬ್ಬನ್ ರಸ್ತೆಯ ಸಿಗ್ನಲ್‌ನಲ್ಲಿ ಅಳವಡಿಸಿರುವ ಎಎನ್‌ಪಿಆರ್ ಕ್ಯಾಮೆರಾಗಳು – ಪ್ರಜಾವಾಣಿ ಚಿತ್ರ
ನಗರದ ಕಬ್ಬನ್ ರಸ್ತೆಯ ಸಿಗ್ನಲ್‌ನಲ್ಲಿ ಅಳವಡಿಸಿರುವ ಎಎನ್‌ಪಿಆರ್ ಕ್ಯಾಮೆರಾಗಳು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರನ್ನು ಫೋಟೊ ಸಮೇತ ಪತ್ತೆ ಹಚ್ಚಿ ದಂಡ ವಿಧಿಸಲು ನಗರದ 50 ಜಂಕ್ಷನ್‌ಗಳಲ್ಲಿ 250 ಎಎನ್‌ಪಿಆರ್ (ಸ್ವಯಂಪ್ರೇರಿತ ವಾಹನಗಳ ನೋಂದಣಿ ಸಂಖ್ಯೆ ಗುರುತಿಸುವ) ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಈ ಕ್ಯಾಮೆರಾಗಳು ಸದ್ಯದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ‘ಸಂಚಾರ ಸಿಗ್ನಲ್‌ಗಳಲ್ಲಿ ಕ್ಯಾಮೆರಾ ಕಣ್ಣಿರಲಿದೆ. ನಿಯಮ ಉಲ್ಲಂಘಿಸುವವರ ಫೋಟೊ ಕ್ಯಾಮೆರಾದಲ್ಲಿ ಸೆರೆಯಾಗಿ, ಸಂಚಾರ ನಿಯಂತ್ರಣ ಕೊಠಡಿಗೆ ಮಾಹಿತಿ ಬರಲಿದೆ. ನಂತರ, ಸಂಬಂಧಪಟ್ಟ ವಾಹನಗಳ ಮಾಲೀಕರ ಮೊಬೈಲ್‌ಗೆ ದಂಡದ ನೋಟಿಸ್ ಸಂದೇಶ ಹೋಗಲಿದೆ’ ಎಂದಿದ್ದಾರೆ.

‘ಸಂಪರ್ಕ ರಹಿತವಾಗಿ ಉಲ್ಲಂಘನೆ ಪತ್ತೆ ಮಾಡಲು ಈ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆದರೆ, ದಂಡ ಸಂಗ್ರಹಿಸುವ ಉದ್ದೇಶ ನಮ್ಮದಲ್ಲ. ಸಾರ್ವಜನಿಕರು, ನಿಯಮ ಉಲ್ಲಂಘಿಸದೇ ಎಚ್ಚರಿಕೆಯಿಂದ ಸಂಚರಿಸಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

ಯಾವೆಲ್ಲ ಉಲ್ಲಂಘನೆ ಕ್ಯಾಮೆರಾದಲ್ಲಿ ಸೆರೆ: ಅತೀ ವೇಗ, ಸಿಗ್ನಲ್ ಜಂಪ್, ಜಿಬ್ರಾ ಕ್ರಾಸಿಂಗ್, ಹೆಲ್ಮೆಟ್ ರಹಿತ ಬೈಕ್ ಚಾಲನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ ಮೊಬೈಲ್ ಬಳಕೆ, ಸೀಟ್ ಬೆಲ್ಟ್ ಧರಿಸದಿರುವುದು ಸೇರಿದಂತೆ ಹಲವು ಉಲ್ಲಂಘನೆಗಳು ಕ್ಯಾಮೆರಾದಲ್ಲಿ ಸೆರೆಯಾಗುವ ವ್ಯವಸ್ಥೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.