ಬೆಂಗಳೂರು: ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯ ಪಶ್ಚಿಮ ವಿಭಾಗದಿಂದ ಮೇ 10ರಂದು ಸಂಚಾರ ಸಂಪರ್ಕ ದಿನ ಆಯೋಜಿಸಲಾಗಿದೆ.
ಮಾಗಡಿ ಮುಖ್ಯರಸ್ತೆಯ ಕೊಟ್ಟಿಗೆಪಾಳ್ಯದ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 11ಕ್ಕೆ ಸಂಚಾರ ಸಂಪರ್ಕ ದಿನ ನಡೆಯಲಿದೆ.
ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ, ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಶಿವ ಪ್ರಕಾಶ್ ದೇವರಾಜ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.